1 Chronicles 16:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
Kannada BSI Bible 2016
ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪ್ರತಿದಿನವೂ ಪ್ರಾತಃಕಾಲಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲ್ಯರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.