1 Chronicles 16:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು. (Verses 41-42)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
Kannada BSI Bible 2016
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಬಳಿಯಲ್ಲಿ ಯೆಹೋವನನ್ನು ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವದಕ್ಕೆ ಹೇಮಾನ್ ಯೆದುತೂನರೂ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಬೇರೆ ಜನರೂ ಇದ್ದರು.
Kannada Bible (KNCL) BSI 2016
ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.