1 Chronicles 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.
Kannada BSI Bible 2016
ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.