1 Chronicles 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
Kannada BSI Bible 2016
ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.
Kannada Bible (KNCL) BSI 2016
ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.