1 Chronicles 17:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಸೌಲನು ರಾಜನಾಗಿದ್ದನು. ಆದರೆ ನಾನು ಅವನನ್ನು ತೆಗೆದುಹಾಕಿದೆನು. ಆದರೆ ನನ್ನ ಕೃಪೆ ನಿನ್ನ ಮಗನಿಂದ ತೊಲಗಿಹೋಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.
Kannada BSI Bible 2016
ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದುಬಿಟ್ಟ ಹಾಗೆ ಅವನಿಂದ ತೆಗೆಯುವದಿಲ್ಲ.
Kannada Bible (KNCL) BSI 2016
ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.