1 Chronicles 17:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೊ ನನಗೆ ತಿಳಿಯುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?
Kannada BSI Bible 2016
ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ದೇವರೇ, ಯೆಹೋವನೇ, ನನ್ನಂಥವನಿಗೆ ನೀನು ಈ ಪದವಿಯನ್ನು ಅನುಗ್ರಹಿಸಿದಿಯೇ! ನಾನೆಷ್ಟರವನು! ನನ್ನ ಮನೆ ಎಷ್ಟರದು! ದೇವರೇ,
Kannada Bible (KNCL) BSI 2016
ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?