1 Chronicles 17:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.
Kannada BSI Bible 2016
ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾತಾನನು ದಾವೀದನಿಗೆ - ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ ಅಂದನು.
Kannada Bible (KNCL) BSI 2016
ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.