1 Chronicles 17:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನೇ, ಈಗ ನೀನು ನನಗೂ ನನ್ನ ಸಂತತಿಗೂ ಈ ವಾಗ್ದಾನವನ್ನು ಮಾಡಿರುವೆ. ಆ ವಾಗ್ದಾನವನ್ನು ಶಾಶ್ವತಗೊಳಿಸು; ಅದು ಸದಾಕಾಲಕ್ಕೂ ಸ್ಥಿರವಾಗಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
Kannada BSI Bible 2016
ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತ ಪಡಿಸಿ ನೆರವೇರಿಸು; ಅದು ಸದಾ ಸ್ಥಿರವಾಗಿರಲಿ.
Kannada Bible (KNCL) BSI 2016
ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.