1 Chronicles 17:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ವಾಗ್ದಾನವನ್ನು ನೆರವೇರಿಸು. ಆಗ ಜನರು, ‘ಸರ್ವಶಕ್ತನಾದ ಯೆಹೋವನು ಇಸ್ರೇಲರ ದೇವರೂ ರಕ್ಷಕನೂ ಆಗಿದ್ದಾನೆ’ ಎಂದು ಹೇಳುವರು. ನಾನು ನಿನ್ನ ಸೇವಕನಾಗಿದ್ದೇನೆ. ನನ್ನ ಕುಟುಂಬವು ಬಲಿಷ್ಠವಾಗಿದ್ದು ನಿನ್ನ ಸೇವೆಯನ್ನು ಮುಂದುವರಿಸುವಂತೆ ಕೃಪೆಯನ್ನು ಅನುಗ್ರಹಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.
Kannada BSI Bible 2016
ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
[ಜನರು -] ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್‍ದೇವರೂ ಇಸ್ರಾಯೇಲ್ಯರ ಶರಣನೂ ಆಗಿದ್ದಾನೆ, ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ ಎಂದು ನಿನ್ನ ನಾಮವನ್ನು ಕೊಂಡಾಡಲಿ.
Kannada Bible (KNCL) BSI 2016
‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.