1 Chronicles 17:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ದೇವರೇ, ನಿನ್ನ ಸೇವಕನಾದ ನನ್ನೊಂದಿಗೆ ನೀನು ಮಾತನಾಡಿದೆ. ನೀನು ನನ್ನ ಕುಟುಂಬವನ್ನು ಸ್ಥಿರವಾಗಿ ಕಟ್ಟುವೆನೆಂದು ವಾಗ್ದಾನ ಮಾಡಿದೆ. ಆದ್ದರಿಂದ ನಾನು ಧೈರ್ಯದಿಂದ ನಿನ್ನ ಸಂಗಡ ಮಾತನಾಡುತ್ತಿದ್ದೇನೆ; ನಿನ್ನ ವಾಗ್ದಾನವನ್ನು ನೆರವೇರಿಸು ಎಂದು ಕೇಳಿಕೊಳ್ಳುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
Kannada BSI Bible 2016
ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದೇವರೇ, ನೀನು ನಿನ್ನ ಸೇವಕನಿಗೆ - ನಾನು ನಿನಗೊಂದು ಮನೆಕಟ್ಟುವೆನು ಎಂದು ವಾಗ್ದಾನಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವದಕ್ಕೆ ಧೈರ್ಯಗೊಂಡನು.
Kannada Bible (KNCL) BSI 2016
ನನ್ನ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.