1 Chronicles 17:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನೇ ದೇವರು. ಸ್ವತಃ ನೀನಾಗಿಯೇ ನನಗೆ ಇಂಥಾ ಒಳ್ಳೆಯ ವಾಗ್ದಾನಗಳನ್ನು ಮಾಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.
Kannada BSI Bible 2016
ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ.
Kannada Bible (KNCL) BSI 2016
ಸರ್ವೇಶ್ವರಾ, ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ ನೀವು ದೇವರಾಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.