1 Chronicles 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’ (Verses 5-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.
Kannada BSI Bible 2016
ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇಸ್ರಾಯೇಲ್ಯರನ್ನು [ಐಗುಪ್ತ ದೇಶದಿಂದ] ಬರ ಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ; ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.
Kannada Bible (KNCL) BSI 2016
“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.