1 Chronicles 17:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 5
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.
Kannada BSI Bible 2016
ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ನ್ಯಾಯಸ್ಥಾಪಕನನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.
Kannada Bible (KNCL) BSI 2016
ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’