1 Chronicles 17:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.
Kannada BSI Bible 2016
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು; ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.
Kannada Bible (KNCL) BSI 2016
ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.