1 Chronicles 18:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
Kannada BSI Bible 2016
ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.
Kannada Bible (KNCL) BSI 2016
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್‍ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.