1 Chronicles 18:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.
Kannada BSI Bible 2016
ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ತೋವಿಗೂ ಹದರೆಜರನಿಗೂ ವಿರೋಧವಿತ್ತು.) ದಾವೀದನು ಹದರೆಜರನ ಮೇಲೆ ಬಿದ್ದು ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದನು.
Kannada Bible (KNCL) BSI 2016
(ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.