1 Chronicles 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
Kannada BSI Bible 2016
ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.
Kannada Bible (KNCL) BSI 2016
ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.