1 Chronicles 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
Kannada BSI Bible 2016
ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
Kannada Bible (KNCL) BSI 2016
ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.