1 Chronicles 18:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.
Kannada BSI Bible 2016
ಇದಲ್ಲದೆ ದಾವೀದನು ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿ
Kannada Bible (KNCL) BSI 2016
ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.