1 Chronicles 18:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.
Kannada BSI Bible 2016
ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸಾವಿರ ರಥಗಳನ್ನೂ ಏಳುಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.
Kannada Bible (KNCL) BSI 2016
ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.