1 Chronicles 18:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪಕಾಣಿಕೆಯನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.
Kannada BSI Bible 2016
ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.
Kannada Bible (KNCL) BSI 2016
ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.