1 Chronicles 19:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಅಬ್ಷೈಗೆ, “ಅರಾಮ್ಯರ ಸೈನ್ಯವು ನನಗಿಂತ ಬಲಿಷ್ಠವಾಗಿದ್ದರೆ, ನೀನು ನನ್ನ ಸಹಾಯಕ್ಕೆ ಬರಬೇಕು. ಅಮ್ಮೋನಿಯರ ಸೈನ್ಯವು ನಿನಗಿಂತ ಬಲಿಷ್ಠವಾಗಿದ್ದರೆ ನಾನು ನಿನ್ನ ಸಹಾಯಕ್ಕೆ ಬರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
Kannada BSI Bible 2016
ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
Kannada Bible (KNCL) BSI 2016
“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.