1 Chronicles 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.
Kannada BSI Bible 2016
ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧೈರ್ಯದಿಂದಿರು; ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
Kannada Bible (KNCL) BSI 2016
ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.