1 Chronicles 19:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನು ತನ್ನ ಸೈನ್ಯದೊಡನೆ ಅರಾಮ್ಯರ ಸೈನ್ಯದ ಮೇಲೆ ದಾಳಿ ಮಾಡಿದನು. ಅರಾಮ್ಯರ ಸೈನ್ಯವು ಅವನೆದುರಿನಿಂದ ಓಡಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
Kannada BSI Bible 2016
ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರೋಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
Kannada Bible (KNCL) BSI 2016
ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.