1 Chronicles 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಾಮ್ಯರ ಸೈನ್ಯವು ಓಡಿಹೋಗುವುದನ್ನು ನೋಡಿದ ಅಮ್ಮೋನಿಯರು ಸಹ ಇಸ್ರೇಲರ ಎದುರಿನಿಂದ ಹಿಂತಿರಿಗಿ ಓಡಿದರು. ಅಬ್ಷೈ ಮತ್ತು ಅವನ ಸೈನಿಕರಿಂದ ಅವರು ಪಲಾಯನಗೈದು ತಮ್ಮ ಪಟ್ಟಣದೊಳಗೆ ಸೇರಿಕೊಂಡರು. ಯೋವಾಬನು ಜೆರುಸಲೇಮಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.
Kannada BSI Bible 2016
ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಓಡಿ ಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಯೆರೂಸಲೇವಿುಗೆ ಹೋದನು.
Kannada Bible (KNCL) BSI 2016
ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು.