1 Chronicles 19:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರು ಯುದ್ಧಕ್ಕೆ ಜನಕೂಡಿಸುತ್ತಾರೆಂಬ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರೇಲ್ ಸೈನ್ಯವನ್ನು ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಅರಾಮ್ಯರೊಂದಿಗೆ ಯುದ್ಧಮಾಡಿದನು. ಯುದ್ಧಸನ್ನದ್ಧರಾಗಿ ಕಾಳಗವನ್ನು ಆರಂಭಿಸಿಯೇ ಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.
Kannada BSI Bible 2016
ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆ ದಾಟಿ ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದುವದಕ್ಕೋಸ್ಕರ ವ್ಯೂಹಕಟ್ಟಿದನು.
Kannada Bible (KNCL) BSI 2016
ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿ, ಸಿರಿಯಾದವರ ಸಮೀಪಕ್ಕೆ ಬಂದು, ಅವರೊಡನೆ ಕಾಳಗ ನಡೆಸಲು ವ್ಯೂಹಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.