1 Chronicles 19:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ಆ ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.
Kannada BSI Bible 2016
ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳು ಸಾವಿರ ರಥಗಳನ್ನು ಹಾಳು ಮಾಡಿ ನಾಲ್ವತ್ತು ಸಾವಿರ ಮಂದಿ ಕಾಲಾಳುಗಳನ್ನು ಕೊಂದುಬಿಟ್ಟನು.
Kannada Bible (KNCL) BSI 2016
ಸಿರಿಯಾದವರು ಯುದ್ಧಕ್ಕೆ ನಿಂತಾಗ ಇಸ್ರಯೇಲರ ಮುಂದೆ ಸೋತು ಓಡಿಹೋದರು;ದಾವೀದನು ಸಿರಿಯಾದವರ ಏಳುಸಾವಿರ ರಥಗಳನ್ನು ಹಾಳುಮಾಡಿದನು. ನಲವತ್ತು ಸಾವಿರ ಮಂದಿ ಕಾಲಾಳುಗಳನ್ನು ಸದೆಬಡಿದನು. ಸೇನಾಪತಿಯಾದ ಶೋಫಕನನ್ನೂ ಕೊಂದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.