1 Chronicles 19:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.
Kannada BSI Bible 2016
ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆ ತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದಾಗ
Kannada Bible (KNCL) BSI 2016
ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.