1 Chronicles 19:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನ ಸೇವಕರು ತಮ್ಮ ಮನೆಗೆ ಹಿಂದಿರುಗಲು ನಾಚಿಕೆಪಟ್ಟರು. ಇದನ್ನು ಅರಿತ ಕೆಲವರು ದಾವೀದನ ಬಳಿಗೆ ಹೋಗಿ ನಡೆದದ್ದನ್ನು ತಿಳಿಸಿದರು. ಆಗ ದಾವೀದನು, “ನೀವು ನಿಮ್ಮ ಗಡ್ಡ ಬೆಳೆಯುವ ತನಕ ಜೆರಿಕೊ ಪಟ್ಟಣದಲ್ಲಿಯೇ ಇರಿ. ಅನಂತರ ನೀವು ಮನೆಗೆ ಬರಬಹುದು” ಎಂದು ತನ್ನ ಸೇವಕರಿಗೆ ಹೇಳಿಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು.
Kannada BSI Bible 2016
ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅಪಮಾನ ಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು.
Kannada Bible (KNCL) BSI 2016
ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು.