1 Chronicles 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡುಮಕ್ಕಳಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.
Kannada BSI Bible 2016
ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್, ಜೆರಹ ಎಂಬವರನ್ನು ಹೆತ್ತಳು.
Kannada Bible (KNCL) BSI 2016
ಯೆಹೂದನಿಗೆ ಅವನ ಸೊಸೆ ತಾಮಾರಳಿಂದ ಪೆರೆಜ್ ಹಾಗೂ ಜೆರಹ ಎಂಬ ಮಕ್ಕಳು ಜನಿಸಿದರು. ಯೆಹೂದನ ಮಕ್ಕಳು ಒಟ್ಟು ಐದು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.