1 Chronicles 2:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾಸ್ತ್ರಿಗಳ ಸಂತಾನ ಯಾಬೇಚ್, ತಿರ್ರಾತ್ಯ, ಶಿಮ್ಗಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್‌ರೇಕಾಬನ್ನು ಹಮಾತನು ಸ್ಥಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
Kannada BSI Bible 2016
ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಬೇಚಿನಲ್ಲಿ ವಾಸಿಸುವ ಕುಲಕರಣಿ ಕುಟುಂಬದವರಾದ ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲಪುರುಷನಾಗಿರುವ ಹಮತನಿಂದ ಉತ್ಪನ್ನರಾದ ಕೇನ್ಯರು.
Kannada Bible (KNCL) BSI 2016
ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.