1 Chronicles 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.
Kannada BSI Bible 2016
ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯಿಂದ ಹುಟ್ಟಿದನು.
Kannada Bible (KNCL) BSI 2016
ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.