1 Chronicles 20:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆಹಾಕಿ ಸಂಪೂರ್ಣವಾಗಿ ನಾಶಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
Kannada BSI Bible 2016
ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ನಡಿಸಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಹೋಗಿ ಅದಕ್ಕೆ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಹಾಳುಮಾಡಿಬಿಟ್ಟನು.
Kannada Bible (KNCL) BSI 2016
ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ, ಯೋವಾಬನು ಬಲವಾದ ಸೈನ್ಯವನ್ನು ಕರೆದುಕೊಂಡು ಹೋಗಿ, ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ, ರಬ್ಬ ನಗರಕ್ಕೆ ಮುತ್ತಿಗೆಹಾಕಿದನು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣದ ಮೇಲೆ ದಾಳಿಮಾಡಿ, ಅದನ್ನು ನಾಶಮಾಡಿದನು.