1 Chronicles 20:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಅರಸನ ಕಿರೀಟವನ್ನು ದಾವೀದನು ತೆಗೆದುಕೊಂಡನು. ಅದು ಎಪ್ಪತ್ತೈದು ಪೌಂಡು ಭಾರವುಳ್ಳದ್ದಾಗಿತ್ತು ಮತ್ತು ಅಮೂಲ್ಯವಾದ ರತ್ನಗಳಿಂದ ಮಾಡಿದ್ದಾಗಿತ್ತು. ಆ ಕಿರೀಟವನ್ನು ದಾವೀದನು ತನ್ನ ತಲೆಯ ಮೇಲೆ ಇಟ್ಟು ಕೊಂಡನು. ಆ ಪಟ್ಟಣದಿಂದ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
Kannada BSI Bible 2016
ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಮಲ್ಕಾಮ್‍ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ನಾಲ್ಕು ಸಾವಿರ ತೊಲೆ ತೂಕದ್ದು; ಅದರಲ್ಲಿದ್ದ ಮಣಿಯನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.
Kannada Bible (KNCL) BSI 2016
ದಾವೀದನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಸುಮಾರು ಮೂವತ್ತೈದು ಕಿಲೋಗ್ರಾಂ ತೂಕದ್ದು. ಅದರಲ್ಲಿ ಇದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ಅವನು ದೊಡ್ಡ ಕೊಳ್ಳೆಯನ್ನೇ ಕೊಂಡು ಹೊಯ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು ರಬ್ಬಾ ನಗರಕ್ಕೆ ಬಂದಾಗ, ಮಲ್ಕಾಮ್ ಮೂರ್ತಿಯ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು. ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.