1 Chronicles 20:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ರಬ್ಬದ ಜನರನ್ನು ಸೆರೆಹಿಡಿದುಕೊಂಡು ಬಂದು ಅವರನ್ನು ಮರಕಡಿಯುವುದಕ್ಕೂ ಕೊಡಲಿ ಮತ್ತು ಹಾರೆಗಳಿಂದ ಕೆಲಸ ಮಾಡುವದಕ್ಕೂ ನೇಮಿಸಿದನು. ಇದೇ ಪ್ರಕಾರ ದಾವೀದನು ಅಮ್ಮೋನಿಯರ ಎಲ್ಲಾ ಪಟ್ಟಣಗಳಲ್ಲಿಯೂ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂತಿರುಗಿ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
Kannada BSI Bible 2016
ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸಮಾಡುವದಕ್ಕೆ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇವಿುಗೆ ಬಂದನು.
Kannada Bible (KNCL) BSI 2016
ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.