1 Chronicles 20:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೊಂದು ಸಾರಿ, ಇಸ್ರೇಲರು ಫಿಲಿಷ್ಟಿಯರೊಂದಿಗೆ ತಿರುಗಿ ಯುದ್ಧಮಾಡುವಾಗ ಯಾಯೀರನ ಮಗನಾದ ಎಲ್ಹಾನಾನನು ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಗೊಲ್ಯಾತನು ಗತ್ ಪಟ್ಟಣದವನಾಗಿದ್ದನು. ಲಹ್ಮೀಯ ಈಟಿಯು ಬಹು ಭಾರವಾಗಿತ್ತು. ಕೈಮಗ್ಗದ ದೊಡ್ಡ ಕುಂಟೆಯಂತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
Kannada BSI Bible 2016
ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಲಹ್ಮೀಯ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಿತ್ತು.
Kannada Bible (KNCL) BSI 2016
ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾದಾಗ, ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.