1 Chronicles 21:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾದನು ದಾವೀದನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ: ‘ನೀನು ಸಹಿಸಿಕೊಳ್ಳಬಲ್ಲ ಶಿಕ್ಷೆಯನ್ನು ಆರಿಸಿಕೊ. ಮೂರು ವರ್ಷಗಳ ಬರಗಾಲ; ಅಥವಾ ನಿನ್ನ ವೈರಿಗಳಿಗೆ ಮೂರು ತಿಂಗಳು ಶರಣಾಗುವಿಕೆ; ಅಥವಾ ಮೂರು ದಿವಸ ಕಾಲ ಭಯಂಕರ ಕಾಯಿಲೆಯು ನಿನ್ನ ರಾಜ್ಯವೆಲ್ಲಾ ಹಬ್ಬುವದು; ಯೆಹೋವನ ದೂತನು ಇಡೀ ಇಸ್ರೇಲನ್ನು ದಾಟಿ ಸಿಕ್ಕಿದವರನ್ನೆಲ್ಲಾ ಹತಿಸಿಬಿಡುವನು.’ ದಾವೀದನೇ, ನನ್ನನ್ನು ನಿನ್ನ ಬಳಿಗೆ ದೇವರೇ ಕಳುಹಿಸಿರುತ್ತಾನೆ. ನೀನು ಯಾವ ಶಿಕ್ಷೆಯನ್ನು ಆರಿಸಿಕೊಳ್ಳುವಿ ಎಂಬುದನ್ನು ನನಗೆ ತಿಳಿಸು.” (Verses 11-12)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ,
Kannada BSI Bible 2016
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ - ಯೆಹೋವನು ಹೇಳುವದೇನಂದರೆ -
Kannada Bible (KNCL) BSI 2016
ಆಗ ಗಾದನು ದಾವೀದನ ಬಳಿಗೆ ಬಂದು, “ಸರ್ವೇಶ್ವರ ಹೇಳುವುದನ್ನು ಕೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,