1 Chronicles 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.
Kannada BSI Bible 2016
ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.