1 Chronicles 21:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.
Kannada BSI Bible 2016
ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.
Kannada Bible (KNCL) BSI 2016
ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.