1 Chronicles 21:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ದೂತನು ಗಾದನಿಗೆ - ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು ಎಂಬದಾಗಿ ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.