1 Chronicles 21:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.
Kannada BSI Bible 2016
ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು.
Kannada Bible (KNCL) BSI 2016
ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.