1 Chronicles 21:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಒರ್ನಾನನು, “ನೀನು ನನ್ನ ಒಡೆಯನೂ ಅರಸನೂ ಆಗಿರುವಿ. ಈ ಕಣವನ್ನು ನೀನೇ ತೆಗೆದುಕೋ. ನೀನು ಏನು ಬೇಕಾದರೂ ಮಾಡು. ಸರ್ವಾಂಗಹೋಮಕ್ಕೆ ಬೇಕಾದ ಕಟ್ಟಿಗೆಗಾಗಿ ನೇಗಿಲುಗಳನ್ನೂ ಧಾನ್ಯಾರ್ಪಣೆಗೆ ಬೇಕಾದ ಗೋಧಿಯನ್ನೂ ಪಶುವನ್ನೂ ನಾನು ಕೊಡುತ್ತೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.
Kannada BSI Bible 2016
ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಒರ್ನಾನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ; ಇವೆಲ್ಲವನ್ನೂ ಕೊಡುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದದ್ದನ್ನು ತೆಗೆದುಕೊಂಡು ಬಲಿ ಅರ್ಪಿಸಬಹುದು. ಬಲಿದಾನಕ್ಕೆ ಇಲ್ಲಿ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೆ ಗೋದಿಯೂ ಇರುತ್ತವೆ, ಇವೆಲ್ಲವನ್ನೂ ಕೊಡುತ್ತೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.