1 Chronicles 21:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ
Kannada Bible (KNCL) BSI 2016
ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.