1 Chronicles 21:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
Kannada BSI Bible 2016
ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ದಾವೀದನು ಯೆಹೋವದೂತನ ಕತ್ತಿಗೆ ಹೆದರಿ ದೇವದರ್ಶನಕ್ಕೋಸ್ಕರ ಅಲ್ಲಿಗೆ ಹೋಗಲಾರದೆ ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನರ್ಪಿಸಿದನು.
Kannada Bible (KNCL) BSI 2016
ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.