1 Chronicles 22:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
Kannada BSI Bible 2016
ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
Kannada Bible (KNCL) BSI 2016
“ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.