1 Chronicles 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
Kannada BSI Bible 2016
ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರಿಗೆ ಕೊಟ್ಟ ವಿಧಿ ನ್ಯಾಯಗಳನ್ನು ನೀನು ಕೈಕೊಳ್ಳುವದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು; ಅಂಜಬೇಡ, ಕಳವಳಗೊಳ್ಳಬೇಡ.
Kannada Bible (KNCL) BSI 2016
ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.