1 Chronicles 22:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
Kannada BSI Bible 2016
ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.
Kannada Bible (KNCL) BSI 2016
ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.