1 Chronicles 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ತನ್ನ ಮಾತನ್ನು ಮುಂದುವರಿಸಿ, “ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ನಿಮಗೆ ಸಮಾಧಾನವನ್ನು ಅನುಗ್ರಹಿಸಿರುತ್ತಾನೆ. ನಮ್ಮ ಸುತ್ತಮುತ್ತಲಿನ ಶತ್ರುಗಳನ್ನು ಸೋಲಿಸಲು ಆತನು ನಮಗೆ ಸಹಾಯಮಾಡಿದ್ದಾನೆ. ಈಗ ಯೆಹೋವನೂ ಆತನ ಜನರೂ ಈ ದೇಶವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
Kannada BSI Bible 2016
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.