1 Chronicles 23:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಹತನು ಚೊಚ್ಚಲಮಗನು. ಜೀಜನು ಎರಡನೆಯವನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳಿರಲಿಲ್ಲ. ಆದ್ದರಿಂದ ಅವರಿಬ್ಬರನ್ನು ಒಂದೇ ಕುಟುಂಬವೆಂದು ಲೆಕ್ಕಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು.
Kannada BSI Bible 2016
ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಹತನು ಪ್ರಧಾನನು. ಜೀಜನು ಎರಡನೆಯವನು. ಯೆಯೂಷ್, ಬೆರೀಯರಿಗೆ ಬಹಳ ಮಂದಿ ಮಕ್ಕಳಿರಲಿಲ್ಲವಾದದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿಯೂ ವರ್ಗವಾಗಿಯೂ ಎಣಿಸಲ್ಪಟ್ಟರು.
Kannada Bible (KNCL) BSI 2016
ಇವರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನು. ಯೆಯೂಷ್, ಬೆರೀಯರಿಗೆ ಬಹಳ ಮಂದಿ ಮಕ್ಕಳು ಇರಲಿಲ್ಲವಾದ್ದರಿಂದ ಅವರಿಬ್ಬರೂ ಒಂದೇ ಕುಟುಂಬ ಹಾಗೂ ವರ್ಗವಾಗಿ ಎಣಿಕೆಯಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಹತನು ಮೊದಲನೆಯವನು, ಜೀಜನು ಎರಡನೆಯವನಾಗಿದ್ದನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳು ಇಲ್ಲದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಕೆಯಾಗಿದ್ದರು.