1 Chronicles 23:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.
Kannada BSI Bible 2016
ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬ ಪ್ರಧಾನರು. ಇವರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರು.
Kannada Bible (KNCL) BSI 2016
ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.